ರಾಮನಗರ, 7 ಫೆಬ್ರವರಿ :
ಆ್ಯಂಕರ್ : ಬಿಹಾರ ಮೂಲದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ನಡೆದಿದೆ.
ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಮೃತ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ವ್ಯಕ್ತಿಯ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಬಳಿಕ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ನಂತರ ಘಟನಾ ಸ್ಥಳದಿಂದ ಆರೋಪಿಗಳು ಪರಾರಿ ಆಗಿದ್ದಾರೆ.
ಸದ್ಯ ಈ ಸಂಬಂಧ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
