ಬೆಂಗಳೂರು, 7 ಫೆಬ್ರವರಿ :
ಆ್ಯಂಕರ್ : ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
