ಮೈಸೂರು, 9 ಫೆಬ್ರವರಿ :
ಆ್ಯಂಕರ್:ಲೋಕಸಭಾ ಚುನಾವಣೆ ಸನಿಹದಲ್ಲೇ ಬಿಜೆಪಿ ಚಾಣಕ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭೆ ಸಭೆ ಚುನಾವಣೆ ಬಳಿಕ ಇದೇ ಮೊದಲ ಭೇಟಿ ಇದಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಫೆ.10 ಶನಿವಾರದಂದು ಕೇಂದ್ರ ಸಚಿವ ಅಮಿತ್ ಶಾ ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್ಗೆ ತೆರಳಲಿರುವ ಶಾ, ಫೆ.11 ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
