ಬೆಂಗಳೂರು, 10 ಫೆಬ್ರವರಿ :
ಆ್ಯಂಕರ್ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ ಎನ್ನಲಾಗ್ತಿದೆ.
ಟಿಕೆಟ್ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿ, ನೇರವಾಗಿ ಮೈಸೂರಿಗೆ ಹೋಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.
ಮೈಸೂರಿನಿಂದ ನೇರವಾಗಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿದೆ.
