ಬೆಂಗಳೂರು, 13 ಫೆಬ್ರವರಿ :
ಆ್ಯಂಕರ್:
ಇದೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮುಂಗಡ ಪತ್ರ (ಬಜೆಟ್) ಮಂಡನೆ ಮಾಡಲಿದ್ದು, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರತಿಭಟನಾಕಾರರು ಆಗಮಿಸಲಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?
ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್ಸಿಎಚ್ ಪೋರ್ಟಲ್ ಅನ್ನು ಡೀಲಿಂಕ್ ಮಾಡಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ. ಒಟ್ಟು ಪ್ರೋತ್ಸಾಹ ಧನ ನೀಡಬೇಕು.
ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ
