ರಾಜ್ ಕೋಟ್, 15 ಫೆಬ್ರವರಿ :
ಆ್ಯಂಕರ್:ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಂದಿನಿಂದ (ಫೆ.15) ಶುರುವಾಗಲಿದೆ. ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ವೇಗಿ ಮಾರ್ಕ್ ವುಡ್ ಕಾಣಿಸಿಕೊಂಡಿದ್ದಾರೆ.
ಅಂದರೆ 2ನೇ ಟೆಸ್ಟ್ ಪಂದ್ಯದಲ್ಲಿ ಮಾರ್ಕ್ ವುಡ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಯುವ ಸ್ಪಿನ್ನರ್ ಶೊಯೆಬ್ ಬಶೀರ್ಗೆ ಚಾನ್ಸ್ ನೀಡಲಾಗಿತ್ತು. ಆದರೆ ಮೂರನೇ ಪಂದ್ಯದಿಂದ ಬಶೀರ್ ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ಮಾರ್ಕ್ ವುಡ್ಗೆ ಸ್ಥಾನ ಕಲ್ಪಿಸಲಾಗಿದೆ.
ಅದರಂತೆ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಜೇಮ್ಸ್ ಅ್ಯಂಡರ್ಸನ್ ಹಾಗೂ ಮಾರ್ಕ್ ವುಡ್ ಅವರನ್ನು ವೇಗಿಗಳಾಗಿ ಕಣಕ್ಕಿಳಿಸಿದರೆ, ಸ್ಪಿನ್ನರ್ಗಳಾಗಿ ರೆಹಾನ್ ಅಹ್ಮದ್ ಮತ್ತು ಟಾಮ್ ಹಾರ್ಟ್ಲಿ ತಂಡದಲ್ಲಿದ್ದಾರೆ.
