ನವದೆಹಲಿ,
ಆ್ಯಂಕರ್ : ಲೈಂಗಿಕ ಅಪರಾಧಗಳ ಹೆಚ್ಚಳಕ್ಕೆ ಕಾರಣವಾಗುವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಅಥವಾ ನೀಲಿ ಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಸರ್ವೋಚ್ಚ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಮಕ್ಕಳ ಶಸ್ತ್ರಚಿಕಿತ್ಸಕ ಸಂಜಯ್ ಕುಲಶ್ರೇಷ್ಠ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಮೊಬೈಲ್ ಇಂಟರ್ನೆಟ್ ಮೂಲಕ ಅಶ್ಲೀಲತೆಯನ್ನು ಸುಲಭವಾಗಿ ಪ್ರವೇಶಿಸುವುದು ಲೈಂಗಿಕ ನಡವಳಿಕೆಯನ್ನು ವಿರೂಪಗೊಳಿಸುವುದು ಮಾತ್ರವಲ್ಲದೆ ಅಪ್ರಾಪ್ತ ಬಾಲಕಿಯರ ವಿರುದ್ಧ ಲೈಂಗಿಕ ಅಪರಾಧಗಳಲ್ಲಿ ಆತಂಕಕಾರಿ ಹೆಚ್ಚಳ ಕ್ಕೆ ಕಾರಣವಾಗುತ್ತದೆ ಎಂದು ವಾದಿಸಿದ್ದಾರೆ.
ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ, ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಗಳು ಬಳಕೆದಾರರನ್ನು ಹೋಸ್ಟ್ ಮಾಡದಂತೆ, ಪ್ರದರ್ಶಿಸದಂತೆ ಮಾಡಲು ಸಮಂಜಸವಾದ ಪ್ರಯತ್ನಗಳನ್ನು ಮಾಡುವುದನ್ನು ಖಚಿತಪಡಿಸಿಕೊಳ್ಳಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುವಂತೆ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
