ಮಂಡ್ಯ, 6 ಮಾರ್ಚ್ ಆ್ಯಂಕರ್:ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಟಾಟಾ ಸುಮೋ ತೆರಳುತ್ತಿತ್ತು. ನಿಡಘಟ್ಟ ಬಳಿ ತೆರಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ.
ಅಪಘಾತದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36)ಸಾವನ್ನಪ್ಪಿದ್ದಾರೆ. ಮೃತ ಫೈರೋಜ್ನ ಸಹೋದರ ಅಪ್ರೋಜ್ಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಅಪ್ರೋಜ್ಗೆ ಮಂಡ್ಯ ಮಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
