ಆ್ಯಂಕರ್:ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಉಪಗ್ರಹ ಸಂಯೋಜನೆ ಮತ್ತು ಪರೀಕ್ಷಾ ಸಂಸ್ಥೆಗೆ ಭೇಟಿ ನೀಡಲಿದ್ದು, ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ನಂತರ ಉಪರಾಷ್ಟ್ರಪತಿ ಅವರು ಕೇರಳದ ತಿರುವನಂತಪುರಂನಲ್ಲಿ ರಾಜನಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಬಳಿಕ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಈಶಾ ಕೇಂದ್ರಕ್ಕೆ ಭೇಟಿ ನೀಡಿ, ಮಹಾಶಿವರಾತ್ರಿ ಆಚರಣೆಯಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮವಿದೆ.
