ವಿಜಯವಾಡ, 10 ಮಾರ್ಚ್ :
ಆ್ಯಂಕರ್:ಬಿಜೆಪಿ ಹೈಕಮಾಂಡ್ ದೇಶದಲ್ಲಿ ಚುನಾವಣಾ ರಣತಂತ್ರಗಳನ್ನು ಹೆಣೆಯುತ್ತಿದೆ. ಈಗಾಗಲೇ ಲೋಕಸಭಾ ಎಲೆಕ್ಷನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರ ಜೊತೆಗೆ ರಾಜ್ಯಗಳಲ್ಲಿ ಮೈತ್ರಿ ಒಪ್ಪಂದ ಮಾಡಿಕೊಂಡು ಸೀಟ್ ಹಂಚಿಕೆಗಳನ್ನು ಮಾಡಿಕೊಳ್ಳುತ್ತಿದೆ. ಅದರಂತೆ ಆಂಧ್ರಪ್ರದೇಶದಲ್ಲೂ ಎರಡು ಪಕ್ಷಗಳ ಜೊತೆ ಸೀಟ್ ಒಪ್ಪಂದಕ್ಕೆ ಒಪ್ಪಿಕೊಂಡು ಅಖಾಡಕ್ಕೆ ಇಳಿಯಲಿದೆ.
ಆಂಧ್ರಪ್ರದೇಶದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಪಕ್ಷಗಳ ನಡುವೆ ಚುನಾವಣಾ ಮೈತ್ರಿ ಅಂತಿಮವಾಗಿದೆ. ಸೀಟು ಹಂಚಿಕೆ ಹೇಗಿರಲಿದೆ ಅನ್ನೋದನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಣೆ ಮಾಡಿದ್ದಾರೆ. ಆಂಧ್ರದ 6 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದ್ದು, 2 ಕ್ಷೇತ್ರದಲ್ಲಿ ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಅಭ್ಯರ್ಥಿಗಳು ಅಖಾಡಕ್ಕಿಳಿಯಲಿದ್ದಾರೆ.
ಇನ್ನುಳಿದ 17 ಲೋಕಸಭಾ ಕ್ಷೇತ್ರಗಳಲ್ಲಿ ಟಿಡಿಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಇನ್ನು ಆಂಧ್ರದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ, ಜನಸೇನಾ ಪಕ್ಷ ಒಟ್ಟು 30 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು ಬಾಕಿ ಉಳಿದ 145 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಡಿಪಿ ಪಕ್ಷ ಸ್ಪರ್ಧಿಸಲಿದೆ ಎಂದು ಹೇಳಲಾಗಿದೆ.
