ಆ್ಯಂಕರ್ :ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾರಿಷಿಯಸ್ ಗೆ ಇಂದಿನಿಂದ ಮೂರು ದಿನಗಳ ಭೇಟಿ ನೀಡಲಿದ್ದಾರೆ. ನಾಳೆ ನಡೆಯಲಿರುವ ಮಾರಿಷಿಯಸ್ ನ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದ್ರೌಪದಿ ಮುರ್ಮು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾರತ ನೌಕಾಪಡೆ ೨ ಹಡಗುಗಳೊಂದಿಗೆ ಪಾಲ್ಗೊಳ್ಳಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ತಮ್ಮ ಭೇಟಿ ಸಂದರ್ಭದಲ್ಲಿ ಮಾರಿಷಿಯಸ್ ನ ಅಧ್ಯಕ್ಷ ಪೃಥ್ವಿರಾಜ್ ಸಿಂಗ್ ರೂಪುನ್ ಮತ್ತು ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಮಾರಿಷಿಯಸ್ ನ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನಾಯಕರನ್ನು ದ್ರೌಪದಿ ಮುರ್ಮು ಭೇಟಿ ಮಾಡಲಿದ್ದಾರೆ.
