ಬಳ್ಳಾರಿ,,
ಆ್ಯಂಕರ್: ಹೆಣ್ಣು ಭ್ರೂಣಲಿಂಗ ಪತ್ತೆಯು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಅದನ್ನು ಉಲ್ಲಂಘಿಸಿದಲ್ಲಿ ಜೈಲು ಶಿಕ್ಷೆ ಮತ್ತು ದಂಡವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್.ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಮ್ಸ್ ಇವರ ಸಂಯುಕ್ತಾಶ್ರಯದಲ್ಲಿ ವೈದ್ಯಾಧಿಕಾರಿಗಳಿಗೆ, ಖಾಸಗಿ ಆಸ್ಪತ್ರೆಯ ಸ್ಕ್ಯಾನಿಂಗ್ ಕೇಂದ್ರಗಳ ತಜ್ಞರಿಗೆ ದತ್ತು ಕಾಯ್ದೆ-2022, ಮಮತೆಯ ತೊಟ್ಟಿಲು, ಪಿಸಿಪಿಎನ್ಡಿಟಿ-ಕಾಯ್ದೆ-1994 ಕಾಯ್ದೆಗಳ ಕುರಿತ ವಿಮ್ಸ್ನ ಬಿ.ಸಿ.ರಾಯ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಣ್ಣು ಭ್ರೂಣಹತ್ಯೆ ತಡೆಯಲು ಇರುವ ಕಾನೂನು ಬಗ್ಗೆ ಜನರಿಗೆ ಜಾಗೃತಿ ನೀಡಬೇಕು ಎಂದರು
ಗರ್ಭಿಣಿಯ ಅಕಾಲಿಕ ಗರ್ಭಪಾತ, ಮೊದಲ ಮಗು ಹೆಣ್ಣು ಇದ್ದು, ಪುನಃ ಗರ್ಭಿಣಿಯಾದಾಗ ಆಗುವ ಗರ್ಭಪಾತ ಅಥವಾ ಶಿಶು ಮರಣ ಸಂಭವಿಸಿದ ಸನ್ನಿವೇಶಗಳನ್ನು ಗ್ರಾಮೀಣ ಮಟ್ಟದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಯಿ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಸಿಬ್ಬಂದಿಯವರು ಗಮನಿಸಬೇಕು. ತಡೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಅರವಳಿಕೆ ತಜ್ಞರಾದ ಡಾ.ಶ್ವೇತಾ ಸಂಕನೂರು ಹಾಗೂ ವಕೀಲರಾದ ಸಿ.ಎಮ್.ಗುರುಬಸವರಾಜ್ ಅವರು ತರಬೇತಿ ಕಾರ್ಯಗಾರದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ನ ನಿರ್ದೇಶಕ ಡಾಜಿ.ಟಿ.ಗಂಗಾಧರ ಗೌಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ್ ಕೆ.ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್ ಬಸಾರೆಡ್ಡಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ,ಎಂ., ಸಿಡಿಪಿಓ ನಾಗರಾಜ, ಡಾ.ಅಬ್ದುಲ್ಲಾ, ಡಾ.ಇಂದ್ರಾಣಿ, ಡಾ.ದುರ್ಗಪ್ಪ, ಚನ್ನಬಸವ ಮಕ್ಕಳ ರಕ್ಷಣಾಧಿಕಾರಿ(ಸಾಂಸ್ಥಿಕ), ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
