ಲೋಕಸಭಾ ಚುನಾವಣೆಗೆ ಸಾಕಷ್ಟು ಆಳೆದು ತೂಗಿ ಕೊನೆಗೂ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿರುವ ಕೇಂದ್ರ ಬಿಜೆಪಿ ವರಿಷ್ಠರು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಇಂದು 18ರಿಂದ 20 ಕ್ಷೇತ್ರಗಳ ಪಟ್ಟಿಯನ್ನು ಬಡುಗಡೆ ಮಾಡುವ ಸಾಧ್ಯತೆ ಇದೆ.
ಒಂದಿಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಅಕೃತ ಘೋಷಣೆಯಷ್ಟೇ ಬಾಕಿಯಿದೆ. ಇದೇ ಸಂದರ್ಭದಲ್ಲಿ ಅನೇಕ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ಕಾದಿದೆ ಎನ್ನಲಾಗಿದೆ.17 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮವಾಗಿದ್ದು, ಕೊನೆ ಕ್ಷಣದ ಬದಲಾವಣೆ ಹೊರತುಪಡಿಸಿ ಬಹುತೇಕ ಇಂದೇ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಬಹುದು.ಶೋಭಾ ಕರಂದ್ಲಾಜೆ ಅವರನ್ನು ಉಡುಪಿ – ಚಿಕ್ಕಮಗಳೂರಿನಿಂದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ. ಮೈಸೂರು-ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ ಹಾಗೂ ಉತ್ತರ ಕನ್ನಡ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪುತ್ತದೆ ಎನ್ನಲಾಗಿದೆ
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಹರಿಯಾಣದ ಕ್ಷೇತ್ರಗಳ ಬಗ್ಗೆ ಸೋಮವಾರದ ಸಿಇಸಿ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಎರಡನೇ ಪಟ್ಟಿಯಲ್ಲಿ 100ರಿಂದ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಅದರಲ್ಲಿ ರಾಜ್ಯದ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಮೊದಲ ಹಂತದಲ್ಲಿ ಬಿಜೆಪಿ 195 ಕ್ಷೇತ್ರಗಳಿಗೆ ಹೆಸರನ್ನು ಘೋಷಿಸಿತ್ತು.
ರಾಜ್ಯದ 28 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳನ್ನು ಜೆಡಿಎ¸ಗೆ ಮೀಸಲಿಡಲಾಗಿದೆ ಎಂದು ಬಿಜೆಪಿ ರಾಜಾ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವು ಮಂಡ್ಯ ಮತ್ತು ಹಾಸನ ಎಂದು ತಿಳಿದುಬಂದಿದೆ. ಇನ್ನು ಪಟ್ಟಿಯಲ್ಲಿ ಹಲವು ಅಚ್ಚರಿಗಳು ಇರಲಿವೆ. ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿರುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.
