ಭೂತಾನ್ ಪ್ರಧಾನಮಂತ್ರಿ ದಶೋ ಶೆರಿಂಗ್ ಟೊಬಗೆ ಅವರು ಇಂದಿನಿಂದ ೫ ದಿನಗಳ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ವರ್ಷದ ಜನವರಿಯಲ್ಲಿ ಪ್ರಧಾನಿಯಾದ ನಂತರ ಅವರು ಕೈಗೊಂಡಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ. ಭೂತಾನ್ ಪ್ರಧಾನಿ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ಅವರು ಮುಂಬೈಗೆ ಭೇಟಿ ನೀಡಲಿದ್ದಾರೆ. ಅವರೊಂದಿಗೆ ವಿದೇಶಾಂಗ ವ್ಯವಹಾರ, ಇಂಧನ ಮತ್ತು ನೈಸರ್ಗಿಕ ಸಂಪನ್ಮೂಲ, ಕೈಗಾರಿಕೆ, ವಾಣಿಜ್ಯ ಮತ್ತು ಉದ್ಯೋಗ ಖಾತೆ ಸಚಿವರು ಹಾಗೂ ಭೂತಾನ್ ಸರ್ಕಾರದ ಹಿರಿಯ ಅಧಿಕಾರಿಗಳು ನಿಯೋಗದಲ್ಲಿ ಆಗಮಿಸಲಿದ್ದಾರೆ.
