ಮುಂಬೈ,
ಖ್ಯಾತ ನಟ ಅಮಿತಾಭ್ ಬಚ್ಚನ್ ಅವರು ಶುಕ್ರವಾರ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಹೇಳಲಾಗಿತ್ತು. ಅಮಿತಾಭ್ ಬಚ್ಚನ್ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದಾಗ ಅಭಿಮಾನಿಗಳಿಗೆ ಆತಂಕ ಆಗೋದು ಸಹಜ. ಆದರೆ, ಅಭಿಮಾನಿಗಳಿಗೆ ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿಪಟ್ಟಿದ್ದಾರೆ.
