ಕಲಬುರಗಿ, 16 ಮಾರ್ಚ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ದಂಡಯಾತ್ರೆ ಆರಂಭಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಗೆ ಆಗಮಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ಕಲಬುರಗಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಾತಾಕಿ ಜೈ ಎಂದು ಕನ್ನಡದಲ್ಲಿ ಭಾಷಣ ಪ್ರಾರಂಭಿಸಿದರು. ಜಗದ್ಗುರು ಬಸವೇಶ್ವರ ಅವರ ನಾಡು ಎಂದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆ ಘೋಷಣೆ ಆಗಲು ಬಾಕಿ ಇದೆ. ಆಗಲೇ ಕರ್ನಾಟಕ ಹೇಳ್ತಿದೆ, ಅಬ್ ಕೀ ಬಾರ್ ಚಾರಸೋ ಪಾರ್ ಅಂತ. ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ 400 ಸೀಟ್ ಗೆಲ್ಲಲು ಎಂದರು.
