ಪಲ್ನಾಡು, 17 ಮಾರ್ಚ್ :
ಪ್ರಧಾನಿ ನರೇಂದ್ರ ಮೋದಿ ಇಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದು, ಪಲ್ನಾಡು ಜಿಲ್ಲೆಯಲ್ಲಿ ನಡೆಯಲಿರುವ ಎನ್ ಡಿ ಎ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಜಯವಾಡದ ಬಿಜೆಪಿ ಕಚೇರಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ, ಪಲ್ನಾಡಿನ ಚಿಲಕಲೂರಿಪೇಟೆಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಟಿಡಿಪಿ ವರಿಷ್ಠ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
