ಶಿವಮೊಗ್ಗ,
ಆ್ಯಂಕರ್:
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ನನ್ನ (ಈಶ್ವರಪ್ಪ) ಪುತ್ರ ಕಾಂತೇಶ್ಗೆ ವಿಧಾನಪರಿಷತ್ ಸ್ಥಾನ ಕೊಡುತ್ತೇವೆ ಅಂತ ಹೇಳಿದ್ದರು. ನನ್ನನ್ನು (ಈಶ್ವರಪ್ಪ) ರಾಜ್ಯಪಾಲರನ್ನಾಗಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಹೇಳಿದ್ದರು. ಆದರೆ ನನಗೆ ಸ್ಥಾನಮಾನಗಳು ಬೇಡ, ಪಕ್ಷ ಉಳಿಯಬೇಕು ಅಷ್ಟೆ ಎಂದು ಬಿಜೆಪಿ ನಾಯಕ ಕೆಎಸ್. ಈಶ್ವರಪ್ಪ ಹೇಳಿದರು.
