ಬಳ್ಳಾರಿ,
ಆ್ಯಂಕರ್ : ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 28 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ನಾರಾ ಭರತರೆಡ್ಡಿಅವರು ಸ್ವಂತದ ಖರ್ಚಿನಲ್ಲಿ 28 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ಬುಧವಾರದಿಂದ ಉಚಿತ ಟ್ಯಾಂಕರ್ ಸೇವೆಯನ್ನು ಪ್ರಾರಂಭಿಸಿ ಜನಸಾಮಾನ್ಯರ ಮೆಚ್ಚುಗೆ ಪಡೆದಿದ್ದಾರೆ.
ಮಳೆಯ ಕೊರತೆಯ ಕಾರಣ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಇಲ್ಲವಾಗಿರುವ ಕಾರಣ ಬಳ್ಳಾರಿ ನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ಸಾಕಷ್ಟು ಸಮಸ್ಯೆ ಆಗಲಿದೆ. ಜಿಲ್ಲಾಡಳಿತ, ತಾಲೂಕು ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರೂ, ಜನರು ನೀರಿಲ್ಲದೇ ಪರದಾಡುತ್ತಿದ್ದಾರೆ.
ಶಾಸಕ ನಾರಾ ಭರತರೆಡ್ಡಿ ಅವರು, ಟಚ್ ಫಾರ್ ಲೈಫ್ ಫೌಂಡೇಶನ್ನ ಮೂಲಕ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಗರೀಕರು ಅಥವಾ ಸ್ಥಳೀಯರು ನೀರಿನ ಸಮಸ್ಯೆ ಇರುವ ಪ್ರದೇಶದ ಮಾಹಿತಿಯನ್ನು ನೀಡಿದಲ್ಲಿ ತುರ್ತಾಗಿ ನೀರನ್ನು ಪೂರೈಕೆ ಮಾಡಲಾಗುತ್ತದೆ. ಸ್ವಂತದ ಖರ್ಚಿನಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದಲ್ಲಿ ಟ್ಯಾಂಕರ್ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುತ್ತದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಕೆ ಮಾಡಬೇಕು ಎಂದು `ಸುದ್ದಿಮೂಲ’ಕ್ಕೆ ತಿಳಿಸಿದರು.
ಚಾನಾಳ್ ಶೇಖರ್ ಅವರು, `ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಹುತೇಕ ಸ್ಲಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗಿದೆ. ಶಾಸಕರ ಟಚ್ ಫಾರ್ ಲೈಫ್ ಫೌಂಡೇಶನ್ನ ಮೂಲಕ ಸಾರ್ವಜನಿಕರಿಗಾಗಿ ಟ್ಯಾಂಕರ್ಗಳ ಮೂಲಕ ಉಚಿತವಾಗಿ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಪೂರೈಕೆಗಾಗಿ ಸ್ವಯಂಸೇವಕರ ತಂಡ ಕಾರ್ಯನಿರ್ವಹಿಸುತ್ತಿದೆ ಎಂದರು.
ನೀರಿನ ಅಗತ್ಯ ಇರುವವರು ಶಾಸಕರ ಕಚೇರಿ ಮೊಬೈಲ್ ಸಂಖ್ಯೆ : 9900108108 ಗೆ ಸಂಪರ್ಕ ಮಾಡಲು ಕೋರಲಾಗಿದೆ.
