ಕೋಲ್ಕತ್ತ,
ಆ್ಯಂಕರ್ :ಪಶ್ಚಿಮ ಬಂಗಾಳದ ಜಲ್ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ಭೀಕರ ಬಿರುಗಾಳಿಯ ಪರಿಣಾಮ ವ್ಯಾಪಕ ಹಾನಿ ಸಂಭವಿಸಿದೆ. ಬಿರುಗಾಳಿಯ ಪ್ರಭಾವದಿಂದ ಹಲವಾರು ಮನೆಗಳು ಮತ್ತು ಮರಗಳು ನೆಲಸಮಗೊಂಡಿವೆ. ಐದು ಮಂದಿ ಮೃತಪಟ್ಟಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಲ್ ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಪತ್ತು ಸಂಭವಿಸಿದೆ. ಇದರ ಪರಿಣಾಮವಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ ಮತ್ತು ಐವರು ಮೃತಪಟ್ಟಿದ್ದಾರೆ. ಪ್ರಸ್ತುತ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಅಧಿಕಾರಿಗಳು ಸಕ್ರಿಯರಾಗಿದ್ದು ಅಗತ್ಯ ನೆರವು ನೀಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಸಂತ್ರಸ್ತರ ನೆರವಿಗೆ ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ.
