ನವದೆಹಲಿ,
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ೧೧ ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ. ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು. ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
