ನವದೆಹಲಿ:ಆ್ಯಂಕರ್ :ಪೈಲಟ್ ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ದಿನಕ್ಕೆ 25-30 ವಿಮಾನಗಳ ಹಾರಾಟ ರದ್ದುಗೊಳಿಸಲಾಗುವುದು ಎಂದು ವಿಸ್ತಾರ ಏರ್ ಲೈನ್ಸ್ ತಿಳಿಸಿದೆ.
ಪರಿಸ್ಕೃತ ವೇತನದ ವಿರುದ್ಧ ಅಸಮಾಧಾನಗೊಂಡಿರುವ ಪೈಲಟ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ ಲೈನ್ ನಲ್ಲಿ ಪೈಲಟ್ ಗಳ ಕೊರತೆ ಎದುರಾಗಿದೆ. ಇದರ ಬೆನ್ನಲ್ಲೇ ವಿಸ್ತಾರದಿಂದ ವಿಮಾನಗಳ ಕಾರ್ಯಾಚರಣೆಯಲ್ಲಿ ಕಡಿತಗೊಳಿಸಿರುವ ಬಗ್ಗೆ ಘೋಷಣೆ ಹೊರಬಿದ್ದಿದೆ.
ರದ್ದತಿಗಳನ್ನು ಹೆಚ್ಚಾಗಿ ದೇಶೀಯ ನೆಟ್ವರ್ಕ್ನಲ್ಲಿ ಮಾಡಲಾಗಿದೆ. ಪ್ರಯಾಣಿಕರಿಗೆ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಏರ್ಲೈನ್ ತಿಳಿಸಿದೆ.
ದಿನಕ್ಕೆ ಸುಮಾರು 25-30 ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಲಾಗಿದೆ. ಅಂದರೆ ನಾವು ಕಾರ್ಯನಿರ್ವಹಿಸುತ್ತಿದ್ದ ಸಾಮರ್ಥ್ಯದ ಸರಿಸುಮಾರು 10% ಕಡಿತಗೊಳಿಸಲಾಗುವುದು ಎಂದು ವಿಸ್ತಾರ ಏರ್ಲೈನ್ಸ್ ಮಾಹಿತಿ ನೀಡಿದೆ.
ಮಾರ್ಚ್ 31 ರಿಂದ ಆರಂಭವಾಗಿರುವ ಬೇಸಿಗೆ ವೇಳಾಪಟ್ಟಿ ಪ್ರಕಾರ, ವಿಸ್ತಾರ ನಿತ್ಯ 300 ಕ್ಕೂ ಅಧಿಕ ವಿಮಾನಗಳ ಹಾರಾಟ ನಡೆಸುತ್ತಿದೆ.
