ಬೆಂಗಳೂರು,ಆ್ಯಂಕರ್:
ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ೨೦೨೪ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಬಿಗಿಭದ್ರತೆಯೊಂದಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
