ಗದಗ, 30 ಏಪ್ರಿಲ್ : ಆ್ಯಂಕರ್:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಮೋಟೆಬೆನ್ನೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಗಿನೆಲೆ ಹೆಲಿಪ್ಯಾಡ್ ಗೆ ಆಗಮಿಸಿದರು.
ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ.ಪಾಟೀಲ್, ಹಾಜರಿದ್ದರು.
ನಂತರ ಕಾಗಿನೆಲೆ ಗುರುಪೀಠಕ್ಕೆ ತೆರಳಿ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
