


ರಾಯಚೂರು, ಏಪ್ರಿಲ್ :
ಆ್ಯಂಕರ್: ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಏ.29ರಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಕಡಿಮೆ ಮತದಾನವಾಗಿರುವ ನಗರದ ಪೋಲೀಂಗ್ ಬೂತ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಗರದ ಚನ್ನಬಸ್ಸಮ್ಮ ಎಂ.ನಾಗಪ್ಪ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಸಖಿ ಮತಗಟ್ಟೆ ಮತ್ತು ಯುವ ಮತದಾರರ ಮತಗಟ್ಟೆ ಕೇಂದ್ರ ಹಾಗೂ ವುಟ್ಕೂರು ಲಕ್ಮ್ಷಮ್ಯ ಫಾರ್ಮಸಿ ಕಾಲೇಜಿನ ಸಖಿ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತಗಟ್ಟೆ ಕೇಂದ್ರಗಳ ಬಿ.ಎಲ್.ಓ ಗಳಿಂದ ಮತದಾನ ಪ್ರಮಾಣ ಹೆಚ್ಚಸಲು ಕೈಗೊಂಡ ಕ್ರಮಗಳ ಕುರಿತು ಚರ್ಚಿಸಿದರು. ಎಲ್ಲಾ ಮತದಾನ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ, ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
:
