ದುಬೈ : ಆ್ಯಂಕರ್:ಎರಡು ವಾರಗಳ ಹಿಂದೆ ಯು ಎ ಇ ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ ನೋಡುತ್ತಿದ್ದಂತೆ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿತ್ತು.
ಎರಡು ವಾರಗಳ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ನಾದ್ಯಂತ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
