ಬೆಂಗಳೂರು : ಆ್ಯಂಕರ್:ಬೆಂಗಳೂರು ನಗರದ ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಆರ್.ಆರ್. ನಗರ ಜ್ಞಾನಭಾರತಿ, ಏಪೋರ್ಟ್ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.
ಮಳೆಯ ಅಬ್ಬರಕ್ಕೆ ತಡರಾತ್ರಿ ನಗರ ವಾಸಿಗಳು ಹೈರಾಣಾಗಿದ್ದಾರೆ. ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ನಿದ್ದೆಯಿಲ್ಲದೇ ಸ್ಥಳೀಯರು ರಾತ್ರಿಯೆಲ್ಲ ನೀರನ್ನು ಹೊರಹಾಕುವ ಕೆಲಸ ಮಾಡಿದರು. ಮನೆಯ ವಸ್ತುಗಳೆಲ್ಲ ಮಳೆಗೆ ತೊಯ್ದಿವೆ.
