ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಮೂರು ದಶಕಗಳಿಂದ ಆಚರಿಸಲಾಗುತ್ತಿದ್ದು, ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದ ಉದ್ದೇಶ, ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಹಾಗೂ ಜನಸಂಖ್ಯಾ ಸ್ಫೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಮತ್ತಿತರ ಸಂಗತಿಗಳಲ್ಲಿ ಜಾಗೃತಿ ಮೂಡಿಸುವುದಾಗಿದೆ.
BulletsIn
- ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ.
- ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಮುಖ ಸವಾಲಾಗಿದೆ.
- ಈ ದಿನವನ್ನು ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ.
- ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು.
- ಜನಸಂಖ್ಯಾ ಸ್ಫೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಮತ್ತಿತರ ಸಂಗತಿಗಳಲ್ಲಿ ಜಾಗೃತಿ ಮೂಡಿಸುವುದು.
- 1989ರಲ್ಲಿ ವಿಶ್ವ ಸಂಸ್ಥೆ ಅನುಮೋದಿಸಿದ ಈ ದಿನ.
- 2024ರ ವಿಶ್ವ ಜನಸಂಖ್ಯಾ ದಿನದ ಧ್ಯೇಯ: ‘ಸಕಾಲಿಕ ಗರ್ಭಧಾರಣೆ ಹಾಗೂ ಎರಡು ಮಕ್ಕಳ ನಡುವೆ ಅಂತರ ಕಾಪಾಡುವುದರಿಂದ, ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳಿಸುವುದು’.
- 2024ರ ಘೋಷ ವಾಕ್ಯ: ‘ಅಭಿವೃದ್ಧಿ ಹೊಂದಿದ ಭಾರತದ ನೂತನ ಗುರುತಿಗಾಗಿ, ಕುಟುಂಬ ಯೋಜನೆ ಅಳವಡಿಕೆ, ಪ್ರತಿ ದಂಪತಿಯ ಹೆಮ್ಮೆ’.
