ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಗಳ ಮೇಲೆ ಹಿಂದೆಯೂ ಅಪರಾಧ ಪ್ರಕರಣಗಳು ದಾಖಲಾಗಿದ್ದವೆಂದು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಸಂಚು ರೂಪಿಸಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾಗಿ ಹೇಳಲಾಗಿದೆ.
BulletsIn
-
ಮಂಗಳೂರಿನ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 3 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
-
ಬಂಧಿತರು –
-
ಅಜರುದ್ದೀನ್ (29) – ಕಳವಾರು ಗ್ರಾಮದ ಆಶ್ರಯ ಕಾಲನಿ ನಿವಾಸಿ
-
ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) – ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿಯ ನಿವಾಸಿ
-
ನೌಷಾದ್ (39) – ಫರಂಗಿಪೇಟೆ, ಕುಂಪನಮಜಲು ರಸ್ತೆ ನಿವಾಸಿ
-
-
ಅಜರುದ್ದೀನ್‌ನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಉಳಿದಿಬ್ಬರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
-
ಈ ಕೊಲೆ ಪ್ರಕರಣದ ತನಿಖೆ ಮುಂದುವರೆದಿದ್ದು, ಇನ್ನೂ ಕೆಲವು ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.
-
ಅಜರುದ್ದೀನ್ ವಿರುದ್ಧ ಪಣಂಬೂರು, ಸುರತ್ಕಲ್, ಮುಲ್ಕಿ ಠಾಣೆಗಳಲ್ಲಿ ಕಳವು ಸಂಬಂಧಿ ಮೂರು ಪ್ರಕರಣಗಳು ಇವೆ.
-
ಅಜರುದ್ದೀನ್, ಸುಹಾಸ್ ಶೆಟ್ಟಿಯ ಚಲನವಲನದ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ.
-
ಅಬ್ದುಲ್ ಖಾದರ್ ಅಲಿಯಾಸ್ ನೌಫಲ್, ಕೊಲೆ ಬಳಿಕ ಆರೋಪಿಗಳನ್ನು ಕಾರಿನಲ್ಲಿ ಪರಾರಿಯಾಗಲು ಸಹಾಯ ಮಾಡಿದ್ದ.
-
ನೌಷಾದ್ ಅಲಿಯಾಸ್ ವಾಮಂಜೂರು ನೌಷಾದ್ ಅಲಿಯಾಸ್ ಚೊಟ್ಟೆ ನೌಷಾದ್, ಕೊಲೆಗೆ ಸಂಚು ರೂಪಿಸಿ ನೇರವಾಗಿ ಭಾಗಿಯಾಗಿದ್ದ.
-
ನೌಷಾದ್ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಹಾಗೂ ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.
-
ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಪ್ರಕಾರ, ಬಂಧಿತರ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಹಿಂದಿನ ಸತ್ಯಾಂಶ ಹೊರಹಾಕಲು ಮುಂದಿನ ಕ್ರಮಗಳು ಕೈಗೊಳ್ಳಲಾಗುತ್ತಿದೆ.
