ಕುರೇಕುಪ್ಪ, 01 ಜುಲೈ (ಹಿ.ಸ.) :
ಆ್ಯಂಕರ್ : ಕುರೇಕುಪ್ಪ ಪುರಸಭೆ ಕಾರ್ಯಾಲಯ ವತಿಯಿಂದ 2025-26 ನೇ ಸಾಲಿನ ಎಸ್‍ಎಫ್‍ಸಿ ಅನುದಾನದ ಮುಕ್ತ ನಿಧಿ ಯೋಜನೆಯಡಿ ಶೇ.24.10 ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬ್ಯಾಂಕ್‍ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 07 ರ ವರೆಗೆ ವಿಸ್ತರಿಸಲಾಗಿದೆ.
ಸೂಚನೆ: ಅನುದಾನ ಅಗತ್ಯ ಅನುಗುಣವಾಗಿ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
