• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
Regional

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

CliQ INDIA
Last updated: July 29, 2025 10:25 am
CliQ INDIA
Share
4 Min Read
SHARE

ಗದಗ, 28 ಜುಲೈ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ರಸಗೊಬ್ಬರ ಕೊರತೆಗೆ ಮೂಲ ಕಾರಣ

ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ.

ರಾಜ್ಯದ ಬೆಳೆ ಪದ್ಧತಿಯನ್ನು ಆಧರಿಸಿ ಮುಂಗಾರು ಹಂಗಾಮಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಕ್ಕೆ 12.95 ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ 11.17 ಲಕ್ಷ ಮೆ.ಟನ್ ಹಂಚಿಕೆ ನಿಗದಿಪಡಿಸಲಾಗಿರುತ್ತದೆ.

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 3.02ಲಕ್ಷ ಮೆ.ಟನ್ ಡಿ.ಎ.ಪಿ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 2.21 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 81,000 ಮೆ.ಟನ್ ಸರಬರಾಜು ಬಾಕಿ ಇರುತ್ತದೆ.

ರಾಜ್ಯದಲ್ಲಿ ಡಿ.ಎ.ಪಿ. ಕೊರತೆ ಕಂಡು ಬಂದಾಗ ಕೃಷಿ ಸಚಿವರ ನಿರ್ದೇಶನದಂತೆ ಪರ್ಯಾಯ ರಸಗೊಬ್ಬರಗಳ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಿ, ಪ್ರಸ್ತುತ, ಡಿ.ಎ.ಪಿ. ರಸಗೊಬ್ಬರದ ಕೊರತೆಯನ್ನು ನೀಗಿಸಲಾಗಿದೆ.

ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 6.80ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 5.35 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 1.45 ಲಕ್ಷ ಮೆ.ಟನ್ ಸರಬರಾಜು ಬಾಕಿ ಇರುತ್ತದೆ.

ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಸರಬರಾಜು ಮಾಡಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಎಲ್ಲಾ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಭಾಯಿಸಲಾಗಿರುತ್ತದೆ.

ರಾಜ್ಯದಿಂದ ರಸಗೊಬ್ಬರ ಪೂರೈಕೆಗೆ ಆರು ಬಾರಿ ಮನವಿ

ಕೇಂದ್ರ ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆ ವತಿಯಿಂದ ಏಪ್ರಿಲ್ ಮಾಹೆಯಿಂದ ಇಲ್ಲಿಯವರೆಗೆ ಆರು ಬಾರಿ ಪತ್ರಗಳನ್ನು ಬರೆದು ಹಂಚಿಕೆಗೆ ಅನುಗುಣವಾಗಿ ಅವಶ್ಯವಿರುವ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಲಾಗಿರುತ್ತದೆ.

ರಾಜ್ಯದ ಕೃಷಿ ಸಚಿವರು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ ಅಗತ್ಯವಿರುವ ಡಿ.ಎ.ಪಿ. ರಸಗೊಬ್ಬರದ ಪೂರೈಕೆಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ಅಲ್ಲದೇ, ಕೃಷಿ ಸಚಿವರೇ ಖುದ್ದಾಗಿ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನು ಇದೇ ಜುಲೈ 7 ರಂದು ಭೇಟಿ ಮಾಡಿ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಿರುತ್ತಾರೆ.

ರಾಜ್ಯದಲ್ಲಿ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರದ ಕಡಿಮೆ ಪೂರೈಕೆಯನ್ನು ಮನಗಂಡು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ, ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಜುಲೈ 17 ಮತ್ತು 25ರಂದು ಪತ್ರ ಮುಖೇನ ಮನವಿ ಸಲ್ಲಿಸಿರುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರದಿಂದ ಹಂಚಿಕೆಗನುಗುಣವಾಗಿ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡದಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಕಂಡು ಬಂದಿರುತ್ತದೆ. ಈ ಸಂಬಂಧವಾಗಿ ರೈತರು ವಿವಿಧ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರದ ಪೂರೈಕೆ ಬಗ್ಗೆ ಅಹವಾಲುಗಳನ್ನು ಸಲ್ಲಿಸಿರುತ್ತಾರೆ.

ಯೂರಿಯಾ ಬೇಡಿಕೆ ಪ್ರಮುಖ ಕಾರಣಗಳು

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮುಂಚಿತವಾಗಿ ಉತ್ತಮ ಮಳೆಯಾಗಿದ್ದು, ಸಾಮಾನ್ಯ ಅವಧಿಗಿಂತ ಮುಂಚೆ ಬಿತ್ತನೆ ಪ್ರಾರಂಭವಾಗಿದೆ. ಇಲ್ಲಿಯವರೆಗೆ ಬಿತ್ತನೆ ವಿಸ್ತೀರ್ಣ ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಹೆಚ್ಚಾಗಿರುತ್ತದೆ. ಹೆಚ್ಚು ರಸಗೊಬ್ಬರ ಅವಶ್ಯವಿರುವ ಮುಸುಕಿನ ಜೋಳದ ವಿಸ್ತೀರ್ಣವು ಅಂದಾಜು 2.00ಲಕ್ಷ ಹೆಕ್ಟೇರ್ ಗಣನೀಯವಾಗಿ ಹೆಚ್ಚಳವಾಗಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಂದಾಜು 13,000 ಹೆಕ್ಟೇರ್ ಪ್ರದೇಶದಲ್ಲಿ ಮರುಬಿತ್ತನೆ ಕೈಗೊಳ್ಳಲಾಗಿರುತ್ತದೆ. ತುಂಗಭದ್ರಾ, ಕೃಷ್ಣಾ, ಕಾವೇರಿ ಇತ್ಯಾದಿ ಪ್ರಮುಖ ಜಲಾಶಯಗಳಿಂದ ಅವಧಿಗಿಂತ ಮುಂಚಿತವಾಗಿ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಬಿಟ್ಟಿರುವುದರಿಂದ ಮುಂಚಿತವಾಗಿ ನಾಟಿ ಕೈಗೊಳ್ಳಲಾಗಿರುವುದು ಯೂರಿಯಾ ಮತ್ತು ರಸಗೊಬ್ಬರ ಬೇಡಿಕೆ ಪ್ರಮುಖ ಕಾರಣವಾಗಿದೆ.

ಇಲಾಖೆಯ ಅಧಿಕಾರಿಗಳು ಪ್ರತಿ ಮಂಗಳವಾರ ಕೇಂದ್ರ ಸರ್ಕಾರದಿಂದ ಜರುಗಿಸುವ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೇ, ಕೇಂದ್ರ ಸರ್ಕಾರದ ರಸಗೊಬ್ಬರ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜ್ಯದಲ್ಲಿ ಅವಶ್ಯವಿರುವ ರಸಗೊಬ್ಬರ ಪೂರೈಕೆಗೆ ಅವಶ್ಯ ಕ್ರಮ ವಹಿಸುತ್ತಿದ್ದಾರೆ.

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ನ್ಯಾನೋ ರಸಗೊಬ್ಬರ ಬಳಕೆಗೆ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಿ ಅರಿವು ಮೂಡಿಸಲಾಗುತ್ತಿದೆ. ಬೆಳೆ, ಮಣ್ಣು, ಮಾನವ, ಜಾನುವಾರು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆಯನ್ನು ಕಡಿತಗೊಳಿಸಲು ರೈತರಲ್ಲಿ ಮನವಿ ಮಾಡಲಾಗಿದೆ.

ಆರಂಭಿಕ ಶುಲ್ಕ ಪರಿಗಣಿಸದೆ ಕೊರತೆಯಾಗಿರುವ 81,000 ಮೆ.ಟನ್ ಡಿ.ಎ.ಪಿ. ಮತ್ತು 1,45,000 ಮೆ.ಟನ್. ಯೂರಿಯಾ ರಸಗೊಬ್ಬರವನ್ನು ಕೇಂದ್ರ ಸರ್ಕಾರವು ಪೂರೈಸಿದಲ್ಲಿ ರೈತರ ಬವಣೆ ನೀಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ಅಗತ್ಯ ಕ್ರಮ ಜರುಗಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP

You Might Also Like

ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉತ್ತರ ಭಾಗದಲ್ಲಿ ಮುಂದುವರಿದ ಒಣಹವೆ
ಬಬಲೇಶ್ವರ ತಾಲೂಕ ಬೆಳೆ ಹಾನಿಗೊಳಗಾದ ರೈತರ ಮಾಹಿತಿ ಪ್ರಕಟ : ಆಕ್ಷೇಪಣೆ ಆಹ್ವಾನ
ಇಂದಿನಿಂದ ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆ
ಗುರುವಾರದ ರಾಶಿ ಫಲ – Hindusthan Samachar Kannada
ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಆಪರೇಷನ್ ಮಹಾದೇವ್ : ಮೂವರು ಪ್ರಮುಖ ಲಷ್ಕರ್ ಭಯೋತ್ಪಾದಕರ ಹತ್ಯೆ
Next Article ಮಹಿಳಾ ಕ್ರಿಕೆಟ್ : ಜಿಂಬಾಬ್ವೆ ವಿರುದ್ಧದ ಸರಣಿ ಗೆದ್ದ ಐರ್ಲೆಂಡ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?