ನವದೆಹಲಿ, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಲೋಕ ಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿಯ ಆರೋಪದಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಇಂತಹ ಆರೋಪ ಮಾಡಬೇಕಾದರೆ ಸಾಕ್ಷ್ಯಗಳೊಂದಿಗೆ ನ್ಯಾಯಾಲಯ ಅಥವಾ ಚುನಾವಣಾ ಆಯೋಗಕ್ಕೆ ದೂರು ನೀಡಬೇಕು. ಮೌಖಿಕ ಆರೋಪಗಳಿಂದ ದೇಶದ ಸ್ವಾಯತ್ತ ಸಂಸ್ಥೆಗಳ ಮೇಲೆ ನಂಬಿಕೆ ಕುಸಿಯುತ್ತದೆ ಎಂದು ಕಿಡಿಕಾರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
