ಹಾಸನ, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ನಿರಂತರ ಸುರಿಯುತ್ತಿರುವ ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೂಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆಲೂರು ತಾಲೂಕಿನ ಪಾಳ್ಯ, ಹೊಸಕೋಟೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಬೇಲೂರು ತಾಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
—————
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
