ಧಾರವಾಡ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಧಾರವಾಡ ಜಿಲ್ಲೆಯಲ್ಲಿ ಇಂದೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.
ಈ ಆಗಸ್ಟ್ 20ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
