ಬೆಳಗಾವಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ.
ಅವಶ್ಯಕತೆ ಇದ್ದರೆ ಮಾತ್ರ ಜನರು ಮನೆಯಿಂದ ಹೊರಗಡೆ ಬರಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇಂದೂ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಇದೇ ವೇಳೆ ಮಳೆಗೆ ಮನೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿ, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಗೋಕಾಕ್ ಪಟ್ಟಣದ ಸಂಗಮ ನಗರದಲ್ಲಿ ನಡೆದಿದೆ.
ಫರೀದಾಬಾನು ಶಕೀಲ್ ಅಹ್ಮದ್ ಕನವಾಡ ಮೃತ ಮಹಿಳೆಯಾಗಿದ್ದು, ಅವರ ಪುತ್ರ ರಫೀಕ್ ಕನವಾಡ ಮತ್ತು ಪುತ್ರಿ ಆಫೀಯಾ ಕನವಾಡ ಗಾಯಗೊಂಡಿದ್ದು, ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
