ಬಳ್ಳಾರಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ 4ನೇ ವಾರ್ಡ್‍ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹತ್ತಿರದ ನಿವಾಸಿಯಾದ ಸಿಂಧವಾಳ ವೆಂಕಟೇಶ್ (77) ಆಗಸ್ಟ್ 06 ರಂದು ಕಾಣೆಯಾಗಿದ್ದಾರೆ.
ಅಂದಾಜು 5.9 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಬಿಳಿ ಕೂದಲು ಮತ್ತು ಬಲಗಣ್ಣು ಸ್ವಲ್ಪ ಮುಚ್ಚಿರುತ್ತದೆ.
ಎದೆಯ ಬಲಭಾಗದಲ್ಲಿ ಕಪ್ಪು ಮಚ್ಚೆ, ಬಲಗಾಲು ತೊಡೆಯ ಭಾಗದಲ್ಲಿ ಹಳೇ ಗಾಯದ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ನೀಲಿ ಗೆರೆ ಗಳಿರುವ ಬಿಳಿ ಬಣ್ಣದ ತುಂಬುತೋಳಿನ ಅಂಗಿ ಮತ್ತು ಬಿಳಿ ಬಣ್ಣದ ಪಂಚೆ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಮಾತನಾಡುತ್ತಾರೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
