ಹುಬ್ಬಳ್ಳಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗೋವಾದಲ್ಲಿ ಕ್ಯಾಸಿನೋ ನಡೆಸುತ್ತಿರುವ ಹುಬ್ಬಳ್ಳಿ ಮೂಲದ ಸಮುಂದರ್ ಸಿಂಗ್ ಹುಬ್ಬಳ್ಳಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಹುಬ್ಬಳ್ಳಿಯ ದೇಶಪಾಂಡೆ ನಗರದ ಕಾಮಾಕ್ಷಿ ಅಪಾರ್ಟ್ಮೆಂಟ್‌ನಲ್ಲಿರುವ ಸಮುಂದರ್ ಸಿಂಗ್ ಅವರ ಮನೆಯಲ್ಲಿ ಹದಿನೈದಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳು ಹಾಗೂ ವ್ಯವಹಾರ ಸಂಬಂಧಿತ ಮಾಹಿತಿಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ.
ಮೂಲಗಳ ಪ್ರಕಾರ, ಸಮುಂದರ್ ಸಿಂಗ್ ಗೋವಾದಲ್ಲಿ ಹಲವಾರು ವರ್ಷಗಳಿಂದ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದು, ಹಣಕಾಸು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
