ಕಠ್ಮಂಡು, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ಸರ್ಕಾರ ಮೌಖಿಕವಾಗಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ, ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಸೇರಿದಂತೆ ತಾಣಗಳು ಪುನಃ ಕಾರ್ಯನಿರ್ವಹಿಸಲು ಆರಂಭಿಸಿವೆ. ಪ್ರಧಾನಿ ಕೆ.ಪಿ. ಶರ್ಮಾ ಓಲಿ ಪ್ರತಿಭಟನೆ ವೇಳೆ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುರಿತು ಆಳವಾದ ದುಃಖ ವ್ಯಕ್ತಪಡಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಎರಡು ದಿನಗಳ ಶೋಕಾಚರಣೆ ಘೋಷಿಸಿದ್ದಾರೆ.
ಹೊಸ ಪೀಳಿಗೆಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ನಾಳೆಯಿಂದ ಯಾವುದೇ ಪ್ರತಿಭಟನೆಗೆ ಕಾರಣವಿಲ್ಲ, ಯಾರೂ ರಸ್ತೆಗೆ ಇಳಿಯಬೇಕಾಗಿಲ್ಲ ಎಂದು ಮನವಿ ಮಾಡಿದರು. ಅವರು ನಿಷೇಧದ ಹಿನ್ನಲೆ ವಿವರಿಸಲು ವಿಫಲವಾದುದಾಗಿ ಒಪ್ಪಿಕೊಂಡು, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಭರವಸೆ ನೀಡಿದರು.
ಸರ್ಕಾರ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸದಿದ್ದರೂ, ಮಾಹಿತಿ ಮತ್ತು ಸಂವಹನ ಸಚಿವ ಪೃಥ್ವಿ ಸುಬ್ಬಾ ಗುರುಂಗ್ ಅವರು ನಿಷೇಧ ತೆರವು ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
