• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೊಪ್ಪಳ : ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ : ಹೆಸರು ನೋಂದಾಯಿಸಲು ಸೂಚನೆ
Regional

ಕೊಪ್ಪಳ : ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ : ಹೆಸರು ನೋಂದಾಯಿಸಲು ಸೂಚನೆ

CliQ INDIA
Last updated: October 4, 2025 7:47 am
CliQ INDIA
Share
3 Min Read
SHARE

ಕೊಪ್ಪಳ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದ್ದು, ಅರ್ಹ ಮತದಾರರಿಂದ ಹೆಸರು ನೋಂದಾಯಿಸಲು ಸೂಚಿಸಿದೆ.

ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಅಧಿಕಾರಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ನಿಯೋಜಿತ ಅಧಿಕಾರಿಗಳನ್ನಾಗಿ ನೇಮಿಸಿರುತ್ತದೆ.

ಅರ್ಹತಾ ದಿನಾಂಕ: 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗಿರುತ್ತದೆ. ಭಾರತ ಚುನಾವಣಾ ಆಯೋಗವು ದಿನಾಂಕ 12.09.2025 ರ ಪತ್ರದನ್ವಯ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 6ರ ಗುರುವಾರ ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರ ಮಂಗಳವಾರದಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ ಅವಕಾಶ ಕಲ್ಪಸಿದೆ. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಭಾರತದ ಪ್ರಜೆಯಾಗಿರುವ, ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ. ಹಾಗೆಯೇ ನಿರ್ದಿಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಆಯಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಲಭ್ಯವಿರುತ್ತದೆ.

ಖುದ್ದಾಗಿ ಅಥವಾ ಅಂಚೆ ಮುಖಾಂತರ ಗುಚ್ಚಗಳಲ್ಲಿ (ಬಲ್ಕ್) ಸಲ್ಲಿಸಿದ ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಮತದಾರರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಟುಂಬದ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳತಕ್ಕದ್ದು.

ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಬೋಧನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2 ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.

ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕøತಗೊಳ್ಳುತ್ತವೆ. ಗುಚ್ಚಗಳಲ್ಲಿ (ಬಲ್ಕ್) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಆಯೋಗವು ಮುಂಬರುವ ದಿನಗಳಲ್ಲಿ ನಮೂನೆ 19 ರ ಅರ್ಜಿಗಳನ್ನು ಇಖಒS ನಲ್ಲಿ ಅಳವಡಿಸಲು ಉದ್ದೇಶಿಸಿದೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು. ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಈ ಮೂಲಕ ಎಲ್ಲಾ ಅರ್ಹ ಮತದಾರರಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ | BulletsIn
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ
ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ನಾಳೆ ಜಿಲ್ಲಾ ಮಟ್ಟದ ಕೆಡಿಪಿ ಸಭೆ
ಆಧುನಿಕ ವಿಮೋಚಕ ಬಸವಣ್ಣ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅಮೃತಸರದಲ್ಲಿ ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ಶಂಕಿತ ಬಂಧನ
Next Article ಗಾಜಾ ಶಾಂತಿ ಯೋಜನೆಗೆ ಹಮಾಸ್ ಒಪ್ಪಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?