ಗುವಾಹಟಿ, 10 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಸಿದ್ಧ ಅಸ್ಸಾಂ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯ ಸಿಐಡಿ ತಂಡವು ಗಾಯಕನ ಇಬ್ಬರು ವೈಯಕ್ತಿಕ ಭದ್ರತಾ ಅಧಿಕಾರಿಗಳಾದ (ಪಿಎಸ್‌ಒ) ನಂದೇಶ್ವರ ಬೋರಾ ಮತ್ತು ಪರೇಶ್ ಬೈಶ್ಯ ಅವರನ್ನು ಇಂದು ಬಂಧಿಸಿದೆ.
ಮೂಲಗಳ ಪ್ರಕಾರ, ನಾಲ್ಕು ದಿನಗಳ ವಿಚಾರಣೆಯ ನಂತರ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಅವರ ಬ್ಯಾಂಕ್ ಖಾತೆಗಳಲ್ಲಿ ಅನುಮಾನಾಸ್ಪದ ಹಣಕಾಸು ವಹಿವಾಟುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಕೆಲವು ದಿನಗಳ ಹಿಂದೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.
ಪೊಲೀಸರ ಪ್ರಕಾರ, ಇಬ್ಬರೂ ಆರೋಪಿಗಳನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಸಿಐಡಿ ತನಿಖೆ ತಂಡವು ಈಗ ಹಣದ ವಹಿವಾಟಿನ ಮೂಲ ಮತ್ತು ಉದ್ದೇಶ ಕುರಿತು ತೀವ್ರ ತನಿಖೆ ನಡೆಸುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
