ಹಾವೇರಿ, 10 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಮಗ್ರ ಕೃಷಿ ಅಭಿವೃದ್ಧಿ ಗೆ ಪ್ರಧಾನಿ ನರೇಂದ್ರ ಮೊದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (ಪಿಎಂಡಿಡಿಕೆವೈ) ಯನ್ನು ರೂಪಿಸಿದ್ದು ರಾಷ್ಟ್ರದ 100 ಜಿಲ್ಲೆಯಲ್ಲಿ ಇದು ಅನುಷ್ಠಾನ ಆಗುತ್ತಿದೆ. ಅದರಲ್ಲಿ ಹಾವೇರಿ ಲೋಕ ಸಭಾ ಕ್ಷೇತ್ರಕ್ಕೆ ಸೇರಿರುವ ಗದಗ ಮತ್ತು ಹಾವೇರಿ ಜಿಲ್ಲೆ ಎರಡನ್ನೂ ಸೇರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಿಸುವುದು ಕೃಷಿಯಲ್ಲಿ ವಿವಿಧ ದವಸ ಧಾನ್ಯಗಳನ್ನು ಬೆಳೆಯುವುದು ಮತ್ತು ಸಮಗ್ರ ಕೃಷಿ ಅಭಿವೃದ್ಧಿ ಜಿಲ್ಲೆಯಲ್ಲಿ ನಿರಾವರಿ ಸೌಲಭ್ಯ ರೈತರಿಗೆ ಅಲ್ಪಾವಧಿ ದೀರ್ಘಾವದಿ ಹಣಕಾಸು ನೆರವು ಮತ್ತು ಸುಗ್ಗಿಯ ನಂತರ ಪಂಚಾಯತ್ ಮತ್ತು ಬ್ಲಾಕ್ ಲೇವಲ್ ನಲ್ಲಿ ದವಸ ಧಾನ್ಯಗಳ ದಾಸ್ತಾನು ನಿರ್ಮಾಣ ಮಾಡುವುದು. ಕೇಂದ್ರ ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳನ್ನು ಸಂಯೋಜನೆಗೊಳಿಸಿ ಸಮಗ್ರವಾಗಿ ಕಾರ್ಯಕ್ರಮಗಳ ಅನುಷ್ಠಾನ ಮಾಡುವುದು ಹಾಗೂ ಸಮ್ಮಗ್ರ ಕೃಷಿ ಅಭಿವೃದ್ಧಿ ಗೆ ದೊಡ್ಡ ಸಹಾಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮೆರಡು ಜಿಲ್ಲೆಗೆ ಮಾಡುತ್ತದೆ. ಅಕ್ಟೋಬರ್ 11 ರಂದು ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವರ್ಚ್ಯುವಲ್ ಮೂಲಕ ಉದ್ಘಾಟಿಸಲಿದ್ದಾರೆ. ಹಾವೇರಿ ಜಿಲ್ಲೆಯ ಹನುಮನಮಟ್ಟಿಯ ಕೃಷಿ ವಿದ್ಯಾಲಯ ಕೇಂದ್ರದಲ್ಲಿ ಉದ್ಘಾಟಿಸಲಾಗುವುದು ಎಲ್ಲ ರೈತ ಬಾಂಧವರು ಪಾಲ್ಗೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
