ವಿಜಯಪುರ, 10 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ವಕೀಲ ರಾಕೇಶ್ ಕಿಶೋರ್ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ನ್ಯಾಯವಾದಿ ರಾಕೇಶ ವರ್ತನೆಯಿಂದ ಇಡೀ ಸಮಾಜಕ್ಕೆ ಕಳಂಕ ತರುವ ಕಾರ್ಯವಾಗಿದೆ. ಇದು ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ, ಈ ಕೃತ್ಯ ಎಸಗಿದ ವಕೀಲ ರಾಕೇಶ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇನ್ನು ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande
