• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ನಾಳೆ ಕುಡತಿನಿಯ ಬಿಟಿಪಿಎಸ್ ಕೈಗಾರಿಕೆಯಲ್ಲಿ ಕಟ್ಟಡ ಕುಸಿತದ ಅಣುಕು ಪ್ರದರ್ಶನ
Regional

ನಾಳೆ ಕುಡತಿನಿಯ ಬಿಟಿಪಿಎಸ್ ಕೈಗಾರಿಕೆಯಲ್ಲಿ ಕಟ್ಟಡ ಕುಸಿತದ ಅಣುಕು ಪ್ರದರ್ಶನ

CliQ INDIA
Last updated: November 14, 2025 9:05 am
CliQ INDIA
Share
2 Min Read
SHARE
ನ.14 ರಂದು ಕುಡತಿನಿಯ ಬಿಟಿಪಿಎಸ್ ಕೈಗಾರಿಕೆಯಲ್ಲಿ ಕಟ್ಟಡ ಕುಸಿತದ ಅಣುಕು ಪ್ರದರ್ಶನ
ನ.14 ರಂದು ಕುಡತಿನಿಯ ಬಿಟಿಪಿಎಸ್ ಕೈಗಾರಿಕೆಯಲ್ಲಿ ಕಟ್ಟಡ ಕುಸಿತದ ಅಣುಕು ಪ್ರದರ್ಶನ

ಕುಡತಿನಿ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಕುಡತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಬಿಟಿಪಿಎಸ್) ದಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕೇಂದ್ರದ ವಿಪತ್ತು ನಿರ್ವಾಹಣಾ ತಂಡದಿ0ದ ನಾಳೆ ಬೆಳಿಗ್ಗೆ 11 ಗಂಟೆಗೆ ಅಣಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಎನ್‌ಡಿಆರ್‌ಎಫ್ ನೊಂದಿಗೆ ಏರ್ಪಡಿಸಲಾಗುವ ಪ್ರಸ್ತಕ ಸಾಲಿನ ಅಣುಕು ಪ್ರದರ್ಶನ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಣುಕು ಪ್ರದರ್ಶನದಲ್ಲಿ ಸಂಬ0ಧಿಸಿದ ಅಧಿಕಾರಿಗಳು ಹಾಜರಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ರಾಸಾಯನಿಕ ಸೋರಿಕೆ, ಕಟ್ಟಡ ಕುಸಿತ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದರು.

ಕಟ್ಟಡ ಕುಸಿತ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಾಗ ಕೈಗೊಳ್ಳಬಹುದಾದ ಕ್ರಮ, ಎಚ್ಚರಿಕೆ ಗಂಟೆ ನೀಡುವುದು, ಎಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಬಂದು ಸೇರುವಂತೆ ಆಜ್ಞೆ ನೀಡುವ ಪರಿ, ಸಾರ್ವಜನಿಕರು-ಕಾರ್ಮಿಕರನ್ನು ರಕ್ಷಿಸಲು ಬೇಕಾದ ಸಾಮಾಗ್ರಿ ಕಿಟ್, ಇದಕ್ಕೆ ಬೇಕಾದ ಇಲಾಖೆಗಳ ಸಹಕಾರ ಸೇರಿದಂತೆ ಹಲವಾರು ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಲಾಗುತ್ತಿದ್ದು, ಎಲ್ಲಾ ಅವಶ್ಯಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಟ್ಟಡ ಕುಸಿತದ ಅಣುಕು ಪ್ರದರ್ಶನ ನಡೆಯುವ ಸಂದರ್ಭದಲ್ಲಿ ಆ ಸ್ಥಳದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ವೈದ್ಯರು, ಆರೋಗ್ಯ ಸಿಬ್ಬಂದಿ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿ ಶಾಮಕದಳ, ವಾಹನ ದಟ್ಟಣೆ ಮತ್ತು ನಿಯಂತ್ರಣ ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ವಿಪತ್ತು ಸಂಭವಿಸಿದಾಗ ಅಧಿಕಾರಿಗಳು ಮತ್ತು ಸಾರ್ವಜನಿಕರು ಸ್ಪಂದಿಸಿದರೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡವು ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ಸಾಧ್ಯ. ಹಾಗಾಗಿ ಅಣಕು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಹೇಳಿದರು.

ನಾಳೆ ಕಾಲೇಜು ಮಟ್ಟದಲ್ಲಿ ಅಣಕು ಪ್ರದರ್ಶನ : ಪ್ರಸ್ತುತದಲ್ಲಿ ಸಂಭವಿಸುತ್ತಿರುವ ತತ್‌ಕ್ಷಣದ ಹೃದಯಾಘಾತ, ಆರೋಗ್ಯ ಸಮಸ್ಯೆ ಹಾಗು ಇತರೆ ಕುರಿತಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳಿಂದ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮತ್ತು ಅಂಚೆ ಕಚೇರಿಯ ಪಕ್ಕದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರುವಂತೆ ಕ್ರಮ ವಹಿಸಬೇಕು ಎಂದು ಡಿಡಿಪಿಯು ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಕೇಂದ್ರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇನ್ಸ್ಪೆಕ್ಟರ್ ರಾಮ್ ಭಜ್, ಅಧಿಕಾರಿ ಸುಭಾಷ್ ಶಿಂಧೆ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತ ಪರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿವಾದ ; ನಾಳೆ ಶಾಂತಿ ಸಭೆ
ಕೆನರಾ ಬ್ಯಾಂಕ್ ಆಶ್ರಯದಲ್ಲಿ ಮನೆ ಮನೆಗೆ ಕೆಸಿಸಿ ಬೆಳೆ ಸಾಲ ಅಭಿಯಾನ
ಮೈಸೂರು ಕಾಂಗ್ರೆಸ್ ಭವನಕ್ಕೆ ಮುಖ್ಯಮಂತ್ರಿ ಭೂಮಿ ಪೂಜೆ
ಕೂಡಲಸಂಗಮ ಶ್ರೀಗಳ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಪಾಟೀಲ
ಬಿಡಿಸಿಸಿಐ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಆಯ್ಕೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಭಯೋತ್ಪಾದನೆಗೆ ನಾಗರಿಕ ಸಮಾಜದಲ್ಲಿ ಸ್ಥಳವಿಲ್ಲ: ಜಾಮಾ ಮಸೀದಿಯ ಶಾಹಿ ಇಮಾಮ್
Next Article ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ಕ್ಷಿಪಣಿ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?