• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್. ಪಾಟೀಲ
Regional

ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್. ಪಾಟೀಲ

CliQ INDIA
Last updated: January 2, 2026 7:05 am
CliQ INDIA
Share
4 Min Read
SHARE
ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ - ಡಿ.ಆರ್. ಪಾಟೀಲ
ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ - ಡಿ.ಆರ್. ಪಾಟೀಲ
ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ - ಡಿ.ಆರ್. ಪಾಟೀಲ
ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ - ಡಿ.ಆರ್. ಪಾಟೀಲ

ಕೊಪ್ಪಳ, 01 ಜನವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರು ಕಂಡ ಕನಸಿನ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ ಎಂದು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ಹೇಳಿದರು.

ಅವರು ಗುರುವಾರ ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಕೊಪ್ಪಳ ಹಾಗೂ ಗ್ರಾಮ ಪಂಚಾಯತ್ ಹಾಲವರ್ತಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಗ್ರಾಮ ಪಂಚಾಯತಿ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಗ್ರಾಮ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಸಭೆಗಳನ್ನು ಆಯೋಜಿಸಿ 2026-27ನೇ ಸಾಲಿನ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕು. ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜನರ ಬೇಡಿಕೆಗಳಿಗೆ ಆದ್ಯತೆ ನೀಡಬೇಕು. ಕಾಲಕಾಲಕ್ಕೆ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ನೀಡಬೇಕು. `ನಮ್ಮ ಸಹಭಾಗಿತ್ವದಲ್ಲಿ’ ಎಂಬ ನಂಬಿಕೆ ಜನರಲ್ಲಿ ಮೂಡಿಸಿದಾಗ ಅಧಿಕಾರ ಯೋಜನೆಗಳ ವಿಕೇಂದ್ರೀಕರಣವಾಗಲು ಸಾಧ್ಯವಾಗುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆ ಸ್ವರೂಪ ಕಾಣಲು ಸಾಧ್ಯವಾಗುತ್ತದೆ. ಹಾಗಾಗಿ ಜನರ ಸಹಭಾಗಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಎಲ್ಲರನ್ನೂ ಸಮಾನವಾಗಿ ಕಂಡಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಎಲ್ಲಾ ಗ್ರಾಮೀಣ ಕುಟುಂಬಕ್ಕೆ ಸಂಪನ್ಮೂಲ ಜೋಡಿಸುವ ಕೆಲಸ ಆಗಬೇಕು. ಇದಕ್ಕಾಗಿ ಗ್ರಾಮೀಣ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಅವುಗಳಿಗೆ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.

ಗ್ರಾಮ ಪಂಚಾಯತಿಗಳು ಗ್ರಾಮ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ. ಮಹಾತ್ಮಾ ಗಾಂಧಿಜೀಯವರ ಕನಸಿನ ಗ್ರಾಮ ಸ್ವರಾಜ್ಯ ಮತ್ತು ಗ್ರಾಮ ಸರ್ಕಾರವನ್ನು ಮಾಡಲು ನಾವೆಲ್ಲರೂ ಬದ್ಧರಾಗೋಣ. ಮನುಷ್ಯ ಯಾರು ಸಹ ಪರಿಪೂರ್ಣನಾಗಿರುವುದಿಲ್ಲ. ಅವನಲ್ಲಿ ಒಂದಲ್ಲ ಒಂದು ದೋಷಗಳಿರುತ್ತವೆ. ಅವುಗಳನ್ನು ಪ್ರತಿವರ್ಷ ಕಡಿಮೆ ಮಾಡಬೇಕು ಮತ್ತು ಒಳ್ಳೆಯ ಗುಣಗಳನ್ನು ಹೆಚ್ಚಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರತಿ ತಿಂಗಳು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡು ಎಲ್ಲರೂ ಶ್ರಮದಾನ ಮಾಡಬೇಕು. ಮಧ್ಯ ನಿಷೇಧಕ್ಕೂ ಎಲ್ಲರೂ ಕೈಜೋಡಿಸಬೇಕು. ಕೃಷಿಯಲ್ಲಿ ರಾಸಾಯನಿಕ ಬಳಕೆ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವುದು ಅನಿವಾರ್ಯತೆಯಿದೆ ಎಂದು ಹೇಳಿದರು.

ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಹಾಲವರ್ತಿ ಗ್ರಾಮ ಪಂಚಾಯತಿ ಒಳಪಡುವ ಎಲ್ಲಾ ಗ್ರಾಮಸ್ಥರು ಸಿದ್ರಾಮಯ್ಯ ಸಾಹೇಬರು ಮತ್ತು ಎಚ್.ಕೆ.ಪಾಟೀಲರನ್ನು ನೆನೆಸುತ್ತಾರೆ ಅವರೆ ಈ ಊರಿನ ಗ್ರಾಮ ಪಂಚಾಯತಿ ಮಾಡಿ ಕೊಟ್ಟವರು. ಗ್ರಾಮ ಪಂಚಾಯತಿ ಆದ ನಂತರ ಹೆಚ್ಚಿನ ಅನುದಾನ ಬರುವುದರ ಜೊತೆಗೆ ಇಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಗಾಂಧೀಜಿಯವರ ದೂರದೃಷ್ಟಿ ಅವರ ವಿಚಾರಗಳನ್ನು ನಾವು ಇತಿಹಾಸದಲ್ಲಿ ಕೇಳಿದ್ದವೆ. ಅವರ ಗ್ರಾಮ ಸ್ವರಾಜ್ಯದ ಕಲ್ಪನೆ ಗ್ರಾಮಗಳ ಉದ್ದಾರವಾಗಿದೆ ಎಂದರು.

ಇಂದು ಹಾಲವರ್ತಿಯಲ್ಲಿ 22 ಕೋಟಿ ರೂ. ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅಡಿಗಲ್ಲು ಹಾಕಿದ್ದೇವೆ. ನಮ್ಮ ಭಾಗದಲ್ಲಿ ಹಿಟ್ನಾಳ, ಕಿಡದಾಳ ಹಾಲವರ್ತಿ ಸೇರಿದಂತೆ 4 ಕಡೆ ಮೋರಾರ್ಜಿ ದೇಸಾಯಿ ವಸತಿ ಶಾಲೆ ಮಾಡಿಸಿದ್ದೆವೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಅವರನ್ನೆ ಆಸ್ತಿವಂತರನ್ನಾಗಿ ಮಾಡಬೇಕು. ಸಮ ಸಮಾಜದ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ದೇಶದ ಇತರೆ ಯಾವುದೇ ರಾಜ್ಯಗಳಲ್ಲಿ ಕಾಣಲು ಸಾಧ್ಯವಿಲ್ಲ. ಈ ಯೋಜನೆಗಾಗಿ ನಮ್ಮ ಸರಕಾರ ಕಳೆದ ಎರಡುವರೆ ವರ್ಷದಲ್ಲಿ ಒಂದು ಲಕ್ಷ ಸಾವಿರ ಕೋಟಿ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಿದೆ. ನಾವು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ. ಗ್ರಾಮಗಳ ಸ್ವಚ್ಚತೆ ಕಡೆಗೆ ನಾವೆಲ್ಲರೂ ಗಮನ ಕೊಡಬೇಕು. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ಭವನದ ಅಧ್ಯಕ್ಷರಾದ ನಾಡೋಜ ಉಡೇ ಪಿ. ಕೃಷ್ಣ ಮಾತನಾಡಿ ಹಾಲವರ್ತಿ ಗ್ರಾಮಸಭೆ ಇಂದು ಎಲ್ಲರೂ ಸಮಾನವಾಗಿ ಕೂಡಿ ಸಭೆ ಮಾಡುತ್ತಿದ್ದು ಗಾಂಧೀಜಿಯವರ ಕಂಡ ಕನಸು ಸಹ ಇದೇ ಆಗಿತ್ತು. ನಾವೆಲ್ಲರೂ ಸಮಾನರು. ಅಧ್ಯಕ್ಷರು ಎಲ್ಲಾ ಸಮಾನರ ಪೈಕಿ ಮೊದಲಿಗರು. ಹಿಂದೆ ಎಲ್ಲಾ ತೀರ್ಮಾನಗಳು ಗ್ರಾಮಸಭೆಯಲ್ಲಿ ಆಗುತ್ತಿದ್ದವು ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಿದ್ದರು. ಗಾಂಧೀಜಿಯವರು ಸ್ವಾತಂತ್ರ‍್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗು ಸಿಗಬೇಕು ಎಂಬುದಾಗಿತ್ತು ಎಂದು ಹೇಳಿದರು.

ದೇಶದ ಇತರೆ ರಾಜ್ಯ ನೋಡಿದಾಗ ಕರ್ನಾಟಕ ಉತ್ತಮವಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನೂರಕ್ಕೆ ನೂರರಷ್ಟು ಜಾರಿಯಾಗಬೇಕಿದೆ. ನಮಗೆ ಇನ್ನೂ ಸಾಮಾಜಿಕ. ಆರ್ಥಿಕ. ನೈತಿಕ ಸ್ವಾತಂತ್ರ‍್ಯ ಬಂದಿಲ್ಲ ಇದನ್ನು ಲಭಿಸಲು ಎಲ್ಲರೂ ನಿರಂತರವಾಗಿ ಕೆಲಸ ಮಾಡಬೇಕಿದೆ. ಜನ ಮನಸ್ಸು ಮಾಡಿದರೆ ಏನಾದರೂ ಮಾಡುತ್ತಾರೆ. ಇಲ್ಲಿಂದ ದಿಲ್ಲಿಯವರೆಗೆ ನಮ್ಮ ನಿರ್ಣಯ ಆದರೆ ಗ್ರಾಮ ಸಭೆ ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.

ಈ ಸಭೆಯಲ್ಲಿ ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಗೂಳೆಪ್ಪ ಹಲಗೇರಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಶಿವರಾಜ, ಹಾಲವರ್ತಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯಪ್ರದಾ ಗೊರವರ, ಉಪಾಧ್ಯಕ್ಷರಾದ ಮಹೇಂದ್ರ, ಸದಸ್ಯರಾದ ನಾಗರಾಜ, ಜ್ಞಾನಪ್ಪ ತಳಕಲ್, ಕೆ.ಸತೀಶ್, ಮಹಾಂತೇಶ ಹಾನಗಲ್ ಹಾಗೂ ಹನುಮಂತಪ್ಪ ಕಿಡದಾಳ, ಇಬ್ರಾಹಿಂ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಈಜಲು ಹೋಗಿದ್ದ ಮೂವರು ನೀರಲ್ಲಿ ಮುಳುಗಿ ಸಾವು
ಕೊಪ್ಪಳ : ಅಕ್ರಮ ಮರಳುಗಾರಿಕೆಗೆ ಕಡಿವಾಣ ಬೀಳಲಿ-ಡಾ. ಬಸವರಾಜ ಕ್ಯಾವಟರ್
ಸಾರಿಗೆ ನೌಕರರ ಮುಷ್ಕರ : ಸಾರ್ವಜನಿಕರ ಪರದಾಟ
ಗಂಗಾವತಿ ವ್ಯಕ್ತಿ ಕಾಣೆ : ಪತ್ತೆಗೆ ಸಹಕರಿಸಲು ಮನವಿ
ಹುಬ್ಬಳ್ಳಿ ಬಳಿ ಬಸ್–ಬೈಕ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಶೀಘ್ರದಲ್ಲೇ ಸ್ವದೇಶಿ ‘ಸುದರ್ಶನ ಚಕ್ರ’ ಅಭಿವೃದ್ಧಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ
Next Article ವಾಯುಪಡೆಯ 50ನೇ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ನಾಗೇಶ್ ಕಪೂರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?