ಬೆಂಗಳೂರು,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬೆಂಗಳೂರು ಅ.16: ಇಂದಿನಿಂದ ತಮಿಳುನಾಡು ರಾಜ್ಯಕ್ಕೆ ಮತ್ತೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನವಾಗಿದೆ. ಈ ಆದೇಶದಿಂದ ಕಾವೇರಿ ಕೊಳ್ಳದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇನ್ನು ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳ ಪ್ರತಿಭಟನೆ 42ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವೇರಿಗಾಗಿ ದೆಹಲಿ ಚಲೋ ಕರೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್
