ಐಜೋಲ್, 16ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಯವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಿಜೋರಾಂನ ಐಜೋಲ್ ನಲ್ಲಿ ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತಿದೆ ಎಂದಿದ್ದಾರೆ. ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ ಎಂದಿದ್ದಾರೆ.
ಸಣ್ಣ ಹಾಗೂ ಮಧ್ಯಮ ವರ್ಗದ ಕುಟುಂಬಗಳನ್ನು ಹಾಳು ಮಾಡಲು ಜಿಎಸ್ಟಿ ರಚಿಸಲಾಗಿದೆ. ಇದು ಭಾರತದ ರೈತರನ್ನು ದುರ್ಬಲಗೊಳಿಸಲು ವಿನ್ಯಾಸಗೊಳಿಸಲಾಗಿದೆ. ನೋಟು ಅಮಾನ್ಯೀಕರಣದಿಂದ ಏನಾಯಿತು ಎಂಬುದು ನಿಮಗೆ ತಿಳಿದಿದೆ ಎಂದು ಹೇಳಿದರು. ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ, ಭಾರತದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಧಾನಿಯವರ ಕಾರ್ಯತಂತ್ರವನ್ನು ನೀವು ಅರ್ಥಮಾಡಿಕೊಳ್ಳಲು ಬಯಸಿದರೆ ಅದನ್ನು ಅದಾನಿ ಎಂದು ಒಂದೇ ಪದದಲ್ಲಿ ಸಂಕ್ಷಿಪ್ತಗೊಳಿಸಬಹುದು, ಎಲ್ಲವನ್ನೂ ಉದ್ಯಮಿಗಳಿಗೆ ಸಹಾಯ ಮಾಡುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.
ನಾನು 1986ರಲ್ಲಿ ನನ್ನ ತಂದೆಯೊಂದಿಗೆ ಇಲ್ಲಿಗೆ ಬಂದಾಗ ನನಗೆ 16 ವರ್ಷ, ಮಿಜೋರಾಂನ ಜನರು ಸೌಮ್ಯ, ದಯೆ ಕರುಣೆಯಿಂದ ತುಂಬಿದ್ದಾರೆ. ಜನರನ್ನು ಹತ್ಯೆ ಮಾಡಲಾಗಿದೆ, ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ ಮತ್ತು ಶಿಶುಗಳನ್ನು ಕೊಲ್ಲಲಾಗಿದೆ, ಆದರೆ ಪ್ರಧಾನಿಗೆ ಅಲ್ಲಿ ಪ್ರಯಾಣಿಸುವುದು ಮುಖ್ಯವಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
