ದೆಹಲಿ,17 ಅಕ್ಟೋಬರ್ (ಹಿ.ಸ):
ಆ್ಯಂಕರ್ :ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ಇದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದೂ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಬೇಕೇ ಎಂಬ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಹಿಂದೂಸ್ತಾನ್ ಸಮಾಚಾರ್
