ಬಳ್ಳಾರಿ, 17 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಮೋಕಾ ಪೆÇಲೀಸ್ ಠಾಣೆಯ ವ್ಯಾಪ್ತಿಯ ವಣೇನೂರು ಗ್ರಾಮದ, ವಾರ್ಡ ನಂ.01, ಬಸವಣ್ಣ ಗುಡಿ ಹತ್ತಿರದ ವೈ.ಉಮ ಮಹೇಶ್ (23) ಜುಲೈ 29ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿಗಳು ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.8 ಅಡಿ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ ಶರ್ಟ್, ಪಾಚಿ ಕಲರ್ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮೋಕಾ ಪೆÇಲೀಸ್ ಠಾಣೆಯ ಪಿ.ಎಸ್.ಐ ಮೊ.9480803050, ಸಿರುಗುಪ್ಪ ಉಪ ವಿಭಾಗ ಡಿ.ಎಸ್.ಪಿ ಮೊ.9480803021, ಪಿ.ಡಿ ಹಳ್ಳಿ ವೃತ್ತದ ಸಿ.ಪಿ.ಐ ಮೊ.9480803031 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದು ಎಂದು ಮೋಕಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.
