ಕೊಪ್ಪಳ, 17 ಅಕ್ಟೋಬರ್ (ಹಿ.ಸ):
ಆ್ಯಂಕರ್: ಎಫ್-6 ಬಸಾಪೂರ ಐ.ಸಿ ಫೀಡರ್ಗಳಿಗೆ ಒಳಪಡುವ ಗ್ರಾಮಗಳಾದ ಟಣಕನಕಲ್, ಓಜನಹಳ್ಳಿ, ಲೇಬಗೇರಿ, ಹನುಮನಳ್ಳಿ ಮತ್ತು ಸಂಗಾಪೂರ ಗ್ರಾಮಗಳಲ್ಲಿ ಅಕ್ಟೋಬರ್ 18ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆವರೆಗೆ ಎಫ್-6 ಬಸಾಪೂರ ಐ.ಪಿ ಪೀಡರ್ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಮೇಲಿನ ಕೆಲಸ ಬೇಗ ಮುಕ್ತಾಯಗೊಂಡಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ತಿ ಕೆಲಸ ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎ.ಆರ್.ಸಲೀಮ್ ಅವರು ತಿಳಿಸಿದ್ದಾರೆ.
