ಕೊಪ್ಪಳ, 17 ಅಕ್ಟೋಬರ್ (ಹಿ.ಸ):
ಆ್ಯಂಕರ್: ಜಿಲ್ಲಾ ಕೇಂದ್ರದಲ್ಲಿ ನವೆಂಬರ್ 01 ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನಿಮಿತ್ತ ಅಕ್ಟೋಬರ್ 20 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ವಹಿಸಿಕೊಳ್ಳಲಿದ್ದು, ಸಂಬಂಧಿಸಿದ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ತಿಳಿಸಿದ್ದಾರೆ.
